ಕರ್ತವ್ಯದಲ್ಲಿದ್ದ ಕಡಬದ ಯೋಧ ಹೃದಯಾಘಾತದಿಂದ ನಿಧನ: ಹುಟ್ಟೂರಿಗೆ ಪಾರ್ಥಿವ ಶರೀರ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯೋಧರೊಬ್ಬರು ಮದ್ರಾಸ್ ರಿಜಿಮೆಂಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಮೃತ ಪಟ್ಟ ಘಟನೆ ವರದಿಯಾಗಿದೆ.

ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತರಪ್ಪೇಳ್ ನಿವಾಸಿ ಜೋನಿ ಎಂಬವರ ಮಗ ಲಿಜೇಶ್ ಕುರಿಯನ್ ಮೃತ ಯೋಧರಾಗಿದ್ದಾರೆ.
ಮಾ.26 ರಂದು ಕೊಯಂಬತ್ತೂರು ಮದ್ರಾಸ್ ರಿಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಹೃದಯಾಘಾತ ಕ್ಕೆ ಒಳಗಾಗಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಇವರ ಪಾರ್ಥಿವ ಶರೀರ ಇಂದು ಕಡಬ ತಲುಪಲಿದ್ದು ಕುಟ್ರುಪ್ಪಾಡಿ ಸಂತ ಮೇರಿಸ್ ಕ್ಯಾಥೋಲಿಕ್ ಫೋರೋನಾ ದೇವಾಲಯದಲ್ಲಿ ಅಂತ್ಯಸಂಸ್ಕಾರ ವಿಧಿವಿಧಾನ ನೆರವೇರಲಿದೆ” ಎಂದು ಚರ್ಚ್ ಧರ್ಮಗುರು ಜೋಸ್ ಆಯಂಕುಡಿ ತಿಳಿಸಿದ್ದಾರೆ. ಮೃತ ಲಿಜೇಶ್ ತಮ್ಮ ಪತ್ನಿ ಜೋಮಿತಾ, ಒಂದು ವರ್ಷದ ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.