ರಾಜಕೀಯರಾಜ್ಯ

ಯಡಿಯೂರಪ್ಪ ಮನೆ ಮೇಲಿನ ದಾಳಿಯ ಹಿಂದೆ ಬಿಜೆಪಿಯ ‘ಸಂತೋಷ ಕೂಟ’ದ ಕೈವಾಡ-ಕಾಂಗ್ರೆಸ್ ಆರೋಪ



ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ಮನೆಯ ಮೇಲೆ ನಡೆದ ಕಲ್ಲು ತೂರಾಟ ದಾಳಿಯ ಹಿಂದೆ ಬಿಜೆಪಿಯ ಸಂತೋಷ ಕೂಟದ ಕೈವಾಡ ಇದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಯಡಿಯೂರಪ್ಪ ಅವರ ಮನೆ ಮೇಲಿನ ದಾಳಿಗೆ ಸಂಬಂಧಿಸಿದ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಯಡಿಯೂರಪ್ಪ ಅವರು ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ, ಆದರೂ ಸರ್ಕಾರದ ಅವಾಂತರಕ್ಕೆ ಬಿಎಸ್‌ವೈ ಮನೆ ಮೇಲೆ ದಾಳಿ ಆಗಿದ್ದೇಕೆ?, ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ’ ಎಂದು ತಿಳಿಸಿದೆ.

ಗೃಹಸಚಿವರ ತವರು ಜಿಲ್ಲೆ, ಅದರಲ್ಲೂ ಮಾಜಿ ಸಿಎಂ ಯಡಿಯೂರಪ್ಪ ಮನೆ ಬಳಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದ ಆರಗ ಜ್ಞಾನೇಂದ್ರ ಅವರದ್ದು ಹೊಣೆಗೇಡಿತನವೋ ಅಥವಾ ‘ಸಂತೋಷ ಕೂಟ’ವನ್ನು ಮೆಚ್ಚಿಸುವ ಷಡ್ಯಂತ್ರವೋ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Leave a Reply

Your email address will not be published. Required fields are marked *

error: Content is protected !!