ಕರಾವಳಿ

ಮಾ.31ರಿಂದ SSLC ಪರೀಕ್ಷೆ: ದ ಕ ಜಿಲ್ಲೆಯಾದ್ಯಂತ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ


ಮಾರ್ಚ್ 31ರಿಂದ SSLC ಪರೀಕ್ಷೆ ನಡೆಯಲಿದ್ದು ದ.ಕ ಜಿಲ್ಲೆಯಾದ್ಯಂತ ಪರೀಕ್ಷಾ ಕೇಂದ್ರಗಳ ಸುತ್ತ ಜಿಲ್ಲಾಧಿಕಾರಿಯವರು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಅಲ್ಲದೆ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ವಿಧಿಸಲಾಗಿದೆ.

ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!