ರಾಜಕೀಯರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ



ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪ್ರಕಟಿಸಿದ್ದಾರೆ.


ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ10 ರಂದು ಮತದಾನ ನಡೆಯಲಿದೆ. ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಘೋಷಣೆಯಾಗಲಿದೆ.

ಏಪ್ರಿಲ್ 13ರಂದು ಚುನಾವಣೆಗೆ ಅಧಿಸೂಚನೆ ಆರಂಭವಾಗಲಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಗೆ ಬರಲಿದೆ.

ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.



ರಾಜ್ಯದಲ್ಲಿ 5.22 ಕೋಟಿ ಮತದಾರರರಿದ್ದು, 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಇದ್ದಾರೆ.

ಇದರಲ್ಲಿ 9,17,241 ಮೊದಲ ಬಾರಿ ಮತದಾರರು, 80 ವರ್ಷ ಮೇಲ್ಪಟ್ಟ 12,15,763 ಮತದಾರರು. ದಿವ್ಯಾಂಗರು 5,55,073 ಮತದಾರರು, 4,699 ತೃತೀಯ ಲಿಂಗಿ ಮತದಾರರು ಇದ್ದಾರೆ.


ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾಗಿವೆ.

Leave a Reply

Your email address will not be published. Required fields are marked *

error: Content is protected !!