ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಬದಲಿಸಲು ನಂದಕುಮಾರ್ ಅಭಿಮಾನಿ ಬಳಗದಿಂದ ಮಂಗಳೂರಿನಲ್ಲಿ ಪ್ರತಿಭಟನೆ:
ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ನಂದಕುಮಾರ್ ಅಭಿಮಾನಿ ಬಳಗದ ಕಾಂಗ್ರೆಸ್ ಕಾರ್ಯಕರ್ತರು 15 ಬಸ್ ಗಳಲ್ಲಿ ಮಂಗಳೂರಿಗೆ ತೆರಳಿ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ.

‘ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’. ‘ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ. ಈ ಕುರಿತು ಪಕ್ಷದ ವರಿಷ್ಠರು ನ್ಯಾಯ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮನವಿ ಸ್ವೀಕರಿಸಲು ಬರಲಿಲ್ಲವೆಂದು ಆಕ್ರೋಶಗೊಂಡ ಕಾರ್ಯಕರ್ತರು:
ಸುಳ್ಯದಿಂದ ತೆರಳಿ ಮಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ನಂದಕುಮಾರ್ ಅಭಿಮಾನಿ ಬಳಗದ ಕಾರ್ಯಕರ್ತರ ಮಾನವಿಯನ್ನು ಸ್ವೀಕರಿಸಲು ಡಿಸಿಸಿ ಅಧ್ಯಕ್ಷರು ಸ್ಥಳಕ್ಕೆ ಬಾರದೆ ಉಪಾಧ್ಯಕ್ಷರು ಬಂದು ಮನವಿಯನ್ನು ಸ್ವೀಕರಿಸಲು ಮುಂದಾದಾಗ ಪ್ರತಿಭಟನೆಗೆ ಸೇರಿದ ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆಯೂ ನಡೆಯಿತು.