ನೆಲ್ಯಾಡಿಯಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಮಹಿಳೆ ಮೃತ್ಯು-ಇಬ್ಬರು ಗಂಭೀರ
ಪುತ್ತೂರು: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಎಂಬಲ್ಲಿ ಮಾ.30ರಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಮಹಿಳೆಯೋರ್ವರು ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಅನ್ನಪೂರ್ಣ(51. ವ )ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆಯ ಪತಿ ಹಾಗೂ ಪುತ್ರನಿಗೆ ಗಂಭೀರ ಗಾಯವಾಗಿದ್ದು ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.