ಬೆಂಗಳೂರು: ಪಾರ್ಕ್’ನಲ್ಲಿ ಕುಳಿತಿದ್ದ ಯುವತಿಯನ್ನು ಎಳೆ ದೊಯ್ದು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ-ನಾಲ್ವರು ಆರೋಪಿಗಳು ಅರೆಸ್ಟ್
ಬೆಂಗಳೂರು: ಪಾರ್ಕ್’ನಲ್ಲಿ ಕುಳಿತಿದ್ದ ಯುವತಿಯನ್ನು ನಾಲ್ವರು ಸೇರಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಬೆಚ್ಚಿ ಬೀಳಿಸುವ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾ. 25ರಂದು ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತ ಕುಳಿತುಕೊಂಡಿದ್ದ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನ ಬೆದರಿಸಿ, ಆ ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿ 4 ಜನರು ಅತ್ಯಾಚಾರ ಮಾಡಿದ್ದಾರೆ. ಈ ಬಗ್ಗೆ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನಾಲ್ವರು ಆರೋಪಿಗಳಾದ ಸತೀಶ್,ವಿಜಯ್,ಶ್ರೀಧರ್,ಕಿರಣ್ ಎಂಬವರನ್ನ ಬಂಧಿಸಿದ್ದಾರೆ.