ಸಿಮೆಂಟ್ ಹಾಸು ಕುಸಿದು ದೇವಾಲಯದ ಬಾವಿಗೆ ಬಿದ್ದು ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆ..!
ಬಾವಿಯ ಸಿಮೆಂಟ್ ಹಾಸು ಕುಸಿದು ಮೃತಪಟ್ಟವರ ಸಂಖ್ಯೆ ಏರಿಕೆಯಾಗಿದೆ. ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಪಟೇಲ್ ನಗರ್ ಪ್ರದೇಶದಲ್ಲಿರುವ ಬಾಲೇಶ್ವರ ಝಲೆಲಾಲ್ ಮಹಾದೇವ ದೇವಾಲಯದಲ್ಲಿ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.

ಸೇನೆ, ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ ನೆರವಿನೊಂದಿಗೆ ಶೋಧ ಕಾರ್ಯಾಚರಣೆ ನಡೆದಿದೆ.
35 ಮೃತದೇಹಗಳನ್ನು ಬಾವಿಯಿಂದ ಹೊರ ತೆಗೆಯಲಾಗಿದ್ದು ಬಾವಿಯಲ್ಲಿ ಕೆಸರು ತುಂಬಿದ ಪರಿಣಾಮ ನಾಪತ್ತೆಯಾದ ವ್ಯಕ್ತಿಗಳನ್ನು ಪತ್ತೆ ಹಚ್ಚಲು ಕೆಸರು ಮೇಲೆತ್ತಲಾಗುತ್ತಿದೆ ಎಂದು ತಿಳಿದು ಬಂದಿದೆ.