ಪುತ್ತೂರು ಕ್ರೈಸ್ತ ಸಮುದಾಯ, ಶಿಕ್ಷಣ ಸಂಸ್ಥೆಗಳ ವಿರುದ್ಧ ದ್ವೇಷಪೂರಿತ ಭಾಷಣ ಆರೋಪ: ಡಾ.ಎಂ ಕೆ ಪ್ರಸಾದ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ದೂರು
ಪುತ್ತೂರು: ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪುತ್ತೂರು ಆದರ್ಶ ಆಸ್ಪತ್ರೆಯ ವೈದ್ಯ ಡಾ.ಎಂ.ಕೆ ಪ್ರಸಾದ್ ಭಂಡಾರಿಯವರು ಕ್ರೈಸ್ತ ಧರ್ಮದ ವಿದ್ಯಾಸಂಸ್ಥೆಗಳ ಬಗ್ಗೆ ದ್ವೇಷಪೂರಿತ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಬಿಷಪ್ ಅತಿ.ವಂ.ಡಾ|ಪೀಟರ್ ಪಾವ್ಲ್ ಸಲ್ದಾನ್ಹಾ ಮತ್ತು ಕೆಥೋಲಿಕ್ ಧರ್ಮಪ್ರಾಂತ್ಯದ ಚರ್ಚ್ ಗಳ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ವಂ|ಡಾ|ಜೆ.ಬಿ.ಸಲ್ಡಾನ್ಹಾ ಮತ್ತು ರಾಯ್ ಕ್ಯಾಸ್ತಲಿನೊ ಹಾಗೂ ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷರಾದ ಸ್ಟ್ಯಾನಿ ಲೋಬೋರವರು ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಪಿ. ಯವರನ್ನು ಭೇಟಿ ಮಾಡಿ ದೂರು ದಾಖಲಿಸಿದ್ದಾರೆ.
ಮನವಿ ನೀಡಿದ ನಿಯೋಗದಲ್ಲಿ ಕಥೋಲಿಕ್ ಸಭಾದ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ನೊರೀನ್ ಪಿಂಟೋ, ಕೋಶಾಧಿಕಾರಿ ಅಲ್ಫೋನ್ಸ್ ಫೆರ್ನಾಂಡೀಸ್, ಉಪಾಧ್ಯಕ್ಷ ವಿನೋದ್ ಪಿಂಟೊ, ಜೊತೆ ಕೋಶಾಧಿಕಾರಿ ಫ್ರಾನ್ಸಿಸ್ ಸೆರಾವೋ, ಬಂಟ್ವಾಳ ವಲಯದ ಅಧ್ಯಕ್ಷ ಆರ್ಥರ್ ಡಿ’ಸೋಜಾ, ಪುತ್ತೂರು ವಲಯದ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನಸ್, ಸಿಟಿ ವಲಯದ ಅಧ್ಯಕ್ಷ ಕಾಲಿನ್ ಮಿರಾಂದಾ, ಮಾಧ್ಯಮ ಸಂಯೋಜಕ ಸ್ಟ್ಯಾನಿ ಬಂಟ್ವಾಳ್ ಉಪಸ್ಥಿತರಿದ್ದರು.
ಕಾರ್ಯಕ್ರಮವೊಂದ ಡಾ. ಎಂ ಕೆ ಪ್ರಸಾದ್ ಅವರು ಪುತ್ತೂರಿನಲ್ಲಿರುವ ಕ್ರೈಸ್ತ ವಿದ್ಯಾಸಂಸ್ಥೆಗಳ ಹೆಸರನ್ನೆತ್ತಿ ಆ ವಿದ್ಯಾಸಂಸ್ಥೆಗಳ ಜಾಗ ನಮ್ಮದು ಅದನ್ನು ಬಿಡಿಸಬೇಕೆಂದು ಆಗುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು