ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು: ಪುನೀತ್ ಕೆರೆಹಳ್ಳಿ ಬಂಧನಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ
ವಾಹನದಲ್ಲಿಜಾನುವಾರು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಬಳಿ ಎ.1ರಂದು ಮಧ್ಯರಾತ್ರಿನಡೆದಿದೆ. ಮಂಡ್ಯ ಮೂಲದ ಇದ್ರೀಷ್ ಪಾಷ (44. ವ) ಮೃತಪಟ್ಟವರು.

ವಾಹನವೊಂದರಲ್ಲಿ ಜಾನುವಾರು ಸಾಗಿಸುತ್ತಿದ್ದ ವೇಳೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ವಾಹನವನ್ನು ತಡೆದಿದ್ದಾರೆ ಎನ್ನಲಾಗಿದೆ.

ಈ ಸಂದರ್ಭ ವಾಹನದಿಂದ ಇಳಿದು ಇದ್ರೀಷ್ ಪಾಷ ಅವರು ಓಡಿಹೋಗಿದ್ದು ಬಳಿಕ ಘಟನೆ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಇದ್ರೀಷ್ ಶವ ಪತ್ತೆಯಾಗಿದೆ.
‘ಇದ್ರೀಷ್ ಅವರನ್ನು ಪುನೀತ್ ಕೆರೆಹಳ್ಳಿ ಹಾಗೂ ಮತ್ತಿತರರು ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಇದ್ರೀಷ್ ಕುಟುಂಬಸ್ಥರು ಸಾತನೂರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಇದ್ರೀಷ್ ಅವರ ಮರಣೋತ್ತರ ಪರೀಕ್ಷೆ ನಡೆಯಲಿದ್ದು ಅದನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.