ಗುಂಡ್ಯ: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಮೇಲೆ ಹಾದು ಹೋದ ಲಾರಿ: ವ್ಯಕ್ತಿ ಸ್ಥಳದಲ್ಲೇ ಮೃತ್ಯು
ಸುಬ್ರಹ್ಮಣ್ಯ: ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಬಳಿ ಏಪ್ರಿಲ್ 2ರಂದು ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಮೇಲೆ ಲಾರಿಯೊಂದು ಹಾದು ಹೋದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ಕೇರಳದ ಮೂಲದ ಪೊನ್ನಪ್ಪನ್ ಮೃತಪಟ್ಟ ವ್ಯಕ್ತಿ. ಕಳೆದ 15 ವರ್ಷದಿಂದ ಗುಂಡ್ಯ ಪರಿಸರದಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಇವರು ಸ್ಥಳೀಯವಾಗಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.