ರಾಜ್ಯ

ಬಿಜೆಪಿ ಸರ್ಕಾರ ಬೆಳೆಸಿ ಪೋಷಿಸಿರುವ ಅಸಹಿಷ್ಣುತೆಯೇ ಸಾತನೂರು ಬಳಿ ಯುವಕನ ಹತ್ಯೆಗೆ ಕಾರಣ-ಕುಮಾರಸ್ವಾಮಿ



ಕನಕಪುರ ತಾಲ್ಲೂಕಿನ ಸಾತನೂರು ಬಳಿ ಜಾನುವಾರು ಸಾಗಾಟ ಮಾಡುತ್ತಿದ್ದ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ಸರ್ಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಜೆಡಿಎಸ್ ನಾಯಕ ಎಚ್.‌ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಚುನಾವಣೆ ಹೊತ್ತಿನಲ್ಲಿ ಇದರ ಹಿಂದಿರುವ ಷಡ್ಯಂತ್ರ ಯಾರಿಗಾದರೂ ಅರ್ಥ ಆಗುವಂತದ್ದೇ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ? ಎಂದು ಪ್ರಶ್ನಿಸಿರುವ ಅವರು ಜಾನುವಾರು ಸಾಗಿಸುತ್ತಿದ್ದಾನೆ ಎಂದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬಹುದಿತ್ತು ಅಥವಾ ಮಾಹಿತಿ ನೀಡಬಹುದಿತ್ತು. ಹತ್ಯೆ ಮಾಡುವುದು ಎಂದರೆ ಅರ್ಥವೇನು? ಎಂದು ಕಿಡಿ ಕಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!