ಕರಾವಳಿರಾಜಕೀಯರಾಜ್ಯ

ನಂದಕುಮಾರ್ ಅಭಿಮಾನಿಗಳ ಸಭೆಯಲ್ಲಿ ಭಾಗವಹಿಸಿದರೆ ಕ್ರಮ-ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಖಡಕ್ ವಾರ್ನಿಂಗ್



ಎ.9ರಂದು ನಂದಕುಮಾರ್ ಅಭಿಮಾನಿಗಳ ಹೆಸರಿನಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ನಿಂತಿಕಲ್ಲಿನಲ್ಲಿ ಹಮ್ಮಿಕೊಂಡಿರುವ ಸಮಾವೇಶಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹೋಗಬಾರದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸೂಚಿಸಿದ್ದಾರೆ.

ಈ ಸಮಾವೇಶಕ್ಕೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಇದು ಅನಧಿಕೃತ ಸಭೆ. ಪಕ್ಷದ ನಾಯಕರಾಗಲಿ, ಕಾರ್ಯಕರ್ತರಾಗಲಿ ಈ ಸಭೆಯಲ್ಲಿ ಭಾಗವಹಿಸಬಾರದು. ಭಾಗವಹಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರು ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಹರೀಶ್‌ಕುಮಾರ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!