ಕರಾವಳಿಕ್ರೈಂ

ಬೆಳ್ತಂಗಡಿಯಲ್ಲಿ ಅನೈತಿಕ ಗೂಂಡಾಗಿರಿ:ಬಸ್ಸಿನಲ್ಲಿ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದಕೆ ಯುವಕನಿಗೆ ಹಲ್ಲೆನಡೆಸಿದ ತಂಡ



ಬೆಳ್ತಂಗಡಿ: ಯುವತಿಯೊಬ್ಬಳೊಂದಿಗೆ ಬಸ್ಸಿನಲ್ಲಿ ಮಾತನಾಡಿದ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ಎ.4ರಂದು ನಡೆದಿದೆ.
ಕಕ್ಕಿಂಜೆ ನಿವಾಸಿ ಸಾಹಿಲ್(22.ವ)ಹಲ್ಲೆಗೊಳಗಾದ ಯುವಕ.

ಆಸ್ಪತ್ರೆಗೆ ಭೇಟಿ ನೀಡಿದ ಎಸ್.ಡಿ.ಪಿ.ಐ ನಿಯೋಗ

ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಸಾಹಿಲ್ ಇಂದು ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದ ಎನ್ನಲಾಗಿದೆ. ಯುವತಿ ಬೆಳ್ತಂಗಡಿಯಲ್ಲಿಬಸ್ಸಿನಿಂದ ಇಳಿದಿದ್ದಾಳೆ.

ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಉಜಿರೆಯ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ ಕಾದು ನಿಂತಿದ್ದ ಯುವಕರ ತಂಡ ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದೀಗ ಹಲ್ಲೆಗೆ ಒಳಗಾಗಿರುವ ಸಾಹಿಲ್ ಬೆಳ್ತಂಗಡಿ ಸರಕಾರಿ ಅಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದು ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನಿಂದ ಮಾಹಿತಿ ಪಡೆದುಕೊಂಡಿದ್ದು, ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ‌.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಎಸ್.ಡಿ‌.ಪಿ ಐ ಪಕ್ಷದ ತಾಲೂಕು ಅಧ್ಯಕ್ಷ ನವಾಜ್ ಕಟ್ಟೆ ಹಾಗೂ ಇತರ ಮುಖಂಡರುಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!