‘ಕೈ’ ಎರಡನೇ ಪಟ್ಟಿಗೆ ಮೂಡದ ಒಮ್ಮತ..?
ಆಕಾಂಕ್ಷಿಗಳು ಪೈಪೋಟಿ ಇರುವ ಕ್ಷೇತ್ರಗಳಿಗೆ ಇನ್ನೂ ಅಂತಿಮವಾಗದ ಅಭ್ಯರ್ಥಿ ಆಯ್ಕೆ
ಕರ್ನಾಟಕ ವಿಧಾನಸಭಾ ಚುನಾವಣೆಗೆ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್ ನಾಯಕರು ಎ.4ರಂದು ದೆಹಲಿಯಲ್ಲಿ ಸುಧೀರ್ಘ ಕಸರತ್ತು ನಡೆಸಿದ್ದು ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಹಿರಿಯ ನಾಯಕರು ಒಮ್ಮತಕ್ಕೆ ಬಾರದ ಕಾರಣ ಗೊಂದಲ ಮುಂದುವರಿದಿದೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಆಕಾಂಕ್ಷಿಗಳ ಒಂದೇ ಹೆಸರು ಇರುವ 49 ಕ್ಷೇತ್ರಗಳ ಪಟ್ಟಿಗೆ ಚುನಾವಣಾ ಸಮಿತಿ ಒಪ್ಪಿಗೆ ಕೊಟ್ಟಿದೆ ಎನ್ನಲಾಗಿದ್ದು ಆಕಾಂಕ್ಷಿಗಳು ಪೈಪೋಟಿ ಇರುವ ಕ್ಷೇತ್ರಗಳಲ್ಲಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ ಎಂದು ತಿಳಿದು ಬಂದಿದೆ.
ಶೇ.70ರಷ್ಟು ಕ್ಷೇತ್ರಗಳ ಪ್ರಕ್ರಿಯೆ ಮುಗಿದಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇನ್ನೆರಡು ದಿನಗಳಲ್ಲಿ ಎಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ.