ಕರಾವಳಿಕ್ರೈಂ

ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಡ್ರೈವರ್ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆ

ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಡ್ರೈವರ್ ವೋರ್ವರ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಎ.7 ರಂದು ವರದಿಯಾಗಿದೆ
ಕೆ.ಎಸ್.ಆರ್.ಟಿ.ಸಿ ಬಸ್ ನ ಡ್ರೈವರ್ & ಕಂಡಕ್ಟರ್ ಆಗಿರುವ ಕುಸುಮಾಧರ ಗೌಡ ಅಭೀರ (35. ವ) ಮೃತಪಟ್ಟವರು.

ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಘಟನೆ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 8 ವರುಷಗಳಿಂದ ಕೆ.ಎಸ್.ಆರ್.ಟಿ.ಸಿ ಉದ್ಯೋಗಿಯಾಗಿದ್ದ ಕುಸುಮಾಧರ ರವರು ಕಳೆದ ಒಂದು ವರುಷದ ಹಿಂದೆ ಮದುವೆಯಾಗಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!