ಟಿಕೆಟ್ ಭರವಸೆ ನೀಡಿ ಯಾರನ್ನೂ ಪಕ್ಷಕ್ಕೆ ಸೇರಿಸಿಕೊಂಡಿಲ್ಲ-ಡಿ.ಕೆ ಶಿವಕುಮಾರ್
ಕಾಂಗ್ರೆಸ್ ಪಕ್ಷಕ್ಕೆ ಯಾರನ್ನೇ ಸೇರಿಸಿಕೊಳ್ಳಬೇಕಾದರೂ ಯಾರಿಗೂ ಟಿಕೆಟ್ ಭರವಸೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಪಕ್ಷಕ್ಕೆ ಯಾರು ಸೇರುವುವುದಾದರೂ ಬೇಷರತ್ತಿನಿಂದ ಸೇರಿಸಿಕೊಳ್ಳುತ್ತೇವೆ. ಹಾಲಿ ಶಾಸಕರು ಬಂದರೂ ಅವರು ಕಾರ್ಯಕರ್ತರಾಗಿ ದುಡಿಯಲು ಬಯಸುತ್ತೇವೆ. ಕೆಲವರಿಗೆ ಆಕ್ರೋಶ ಇದ್ದು ಅವರನ್ನು ನಾವು ಸರಿ ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.