ಕರಾವಳಿ

ಪೆರ್ನೆ ಟ್ಯಾಂಕರ್ ದುರಂತಕ್ಕೆ ಇಂದಿಗೆ 10 ವರ್ಷ: ಇನ್ನೂ ಮಾಸದ ಕಹಿ ನೆನಪು



2013 ಎಪ್ರಿಲ್ 9 ರಂದು ಉಪ್ಪಿನಂಗಡಿ ಅಡುಗೆ ಅನಿಲ ಸಾಗಾಟದ ಟ್ಯಾಂಕರ್ ಅಪಘಾತಕ್ಕೀಡಾಗಿ ಅನಿಲ ಸೋರಿಕೆಯಾಗಿ ಅಗ್ನಿ ಅನಾಹುತ ಸಂಭವಿಸಿದ ಭೀಕರ ಘಟನೆಯಿಂದ 13 ಮಂದಿ ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆಗೆ ಇಂದಿಗೆ 10 ವರ್ಷ ಸಂದಿದೆ. ಆದರೂ ದುರಂತದ ಕಹಿ ನೆನಪು ಇನ್ನೂ ಮಾಸಿಲ್ಲ.

ಮಂಗಳೂರಿನಿಂದ ಬೆಂಗಳೂರಿನತ್ತ ಅನಿಲ ಸಾಗಾಟದ ಟ್ಯಾಂಕರ್ ಪೆರ್ನೆ ತಿರುವಿನಲ್ಲಿ ಅಪಘಾತಕ್ಕೀಡಾಗಿ ಮಗುಚಿ ಬಿದ್ದ ಪರಿಣಾಮ ಅನಿಲ ಸೋರಿಕೆಯುಂಟಾಗಿ ಬೆಂಕಿ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆ ಪರಿಸರದಾದ್ಯಂತ ವ್ಯಾಪಿಸಿ ಮನೆ, ಅಂಗಡಿಯೊಳಗಿದ್ದ ಜನರೆಲ್ಲಾ ಬೆಂಕಿಗೆ ಸಿಲುಕಿದ್ದರು. ಕ್ಷಣ ಮಾತ್ರದಲ್ಲಿ ಬೆಂಕಿ ಇಡೀ ಪರಿಸರದಲ್ಲಿ ವ್ಯಾಪಿಸಿತ್ತು. ಇದರಿಂದಾಗಿ ಮಹಿಳೆ ಮಕ್ಕಳನ್ನು ಒಳಗೊಂಡಂತೆ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಾಳುಗಳ ಪೈಕಿ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಜೀವ ಉಳಿಸಲು ಯುವಕನೋರ್ವ ಸುಟ್ಟ ಗಾಯಗಳೊಂದಿಗೆ ಹೆದ್ದಾರಿಯಲ್ಲಿ ಓಡಿ ಬರುತ್ತಿದ್ದ ಹೃದಯ ವಿದ್ರಾವಕ ದೃಶ್ಯವೊಂದು ವಿಡಿಯೋ ಚಿತ್ರೀಕರಣದಲ್ಲಿ ಆಗ ಸೆರೆಯಾಗಿದ್ದು ಮನ ಕಲಕುವಂತಿತ್ತು. ಅಂದಿನ ಘಟನೆಯನ್ನು ಈಗಲೂ ಸ್ಥಳೀಯರು ನೆನಪಿಸಿಕೊಳ್ಳುತ್ತಿದ್ದು ತಮ್ಮವರನ್ನು ಕಳೆದುಕೊಂಡ ನೋವು ಈಗಲೂ ಅವರವರ ಕುಟುಂಬಸ್ಥರನ್ನು ಕಾಡುತ್ತಿದೆ.

ಅಂದು ಟ್ಯಾಂಕರ್ ದುರಂತ ಸಂಭವಿಸಿದ ಬಳಿಕ ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡಲು ಕೋಡಿಂಬಾಡಿ ರೈ ಎಸ್ಟೇಟ್ ಎಜ್ಯುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ಪ್ರವರ್ತಕ ಅಶೋಕ್ ಕುಮಾರ್ ರೈಯವರು ಸಂತ್ರಸ್ಥರ ಹೋರಾಟ ಸಮಿತಿ ರಚಿಸಿ ಹೋರಾಟ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!