ಕ್ರೈಂರಾಷ್ಟ್ರೀಯ

ಧಾರ್ಮಿಕ ಧ್ವಜವನ್ನು ಅಪವಿತ್ರಗೊಳಿಸಿದ ಆರೋಪ: ಜಮ್ಶೆಡ್‌ಪುರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ



ಧಾರ್ಮಿಕ ಧ್ವಜವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಜಮ್ಶೆಡ್‌ಪುರದ ಶಾಸ್ತ್ರಿನಗರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಸಿಆರ್‌ಪಿಸಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

‘ಈ ಪ್ರದೇಶದಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಘರ್ಷಣೆ ವೇಳೆ ಅಂಗಡಿ ಮತ್ತು ಆಟೊ ರಿಕ್ಷಾಗೆ ಬೆಂಕಿ ಹಚ್ಚಲಾಗಿದೆ. ಗಲಭೆಕೋರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.

ರಾಮನವಮಿ ಪ್ರಯುಕ್ತ ಹಾಕಿದ್ದ ಧ್ವಜಕ್ಕೆ ಕಿಡಿಗೇಡಿಗಳು ಮಾಂಸದ ತುಂಡನ್ನು ಎಸೆದಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ ಘರ್ಷಣೆ ನಡೆದಿದ್ದು ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿ, ಕಿಡಿಗೇಡಿಗಳನ್ನು 24 ಗಂಟೆಯೊಳಗೆ ಬಂಧಿಸಬೇಕು ಎಂದು ಪೊಲೀಸರನ್ನು ಒತ್ತಾಯಿಸಿದ್ದವು.
ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!