ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ಆಯ್ಕೆಯಾಗಿದ್ದೇನೆ; ಸಂಜೆಯೊಳಗೆ ಘೋಷಣೆಯಾಗಲಿದೆ-ಅಶೋಕ್ ರೈ
ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನನ್ನನ್ನು ಹೈಕಮಾಂಡ್ ಆಯ್ಕೆ ಮಾಡಿದೆ. ಈ ಬಗ್ಗೆ ಪಕ್ಷದ ವರಿಷ್ಠರು ಮಾಹಿತಿ ನೀಡಿದ್ದಾರೆ. ಸಂಜೆಯೊಳಗೆ ಘೋಷಣೆ ಮಾಡಬಹುದು ಎಂದು ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದ್ದಾರೆ.

ಪಕ್ಷವು ಮೂರು ಬಾರಿ ಕ್ಷೇತ್ರದ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವೇ ಕಾರ್ಯ ನಡೆಸಿತ್ತು. ಕೊನೆ ಗಳಿಗೆಯಲ್ಲಿ ನನಗೆ ಅವಕಾಶ ಲಭಿಸಿದೆ. ಎಲ್ಲಾ ಆಕಾಂಕ್ಷಿಗಳನ್ನು ಜೊತೆ ಸೇರಿಸಿಕೊಂಡು ಪಕ್ಷದ ಪರ ಪ್ರಚಾರ ನಡೆಸಲಿದ್ದೇನೆ. ಆಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ವಿವಿಧ ಹುದ್ದೆಗಳನ್ನು ನೀಡುವುದಾಗಿ ವರಿಷ್ಠರು ತಿಳಿಸಿದ್ದಾರೆ ಎಂದು ಅಶೋಕ್ ಕುಮಾರ್ ತಿಳಿಸಿದರು.
ಪುತ್ತೂರಿನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.