ಸಾವಿರಾರು ಬೆಂಬಲಿಗ ಕಾರ್ಯಕರ್ತರ ಜೊತೆ ರೋಡ್ ಶೋ ನಡೆಸಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ನಂದಕುಮಾರ್

ಸುಳ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿ ಫಾರಂ ಬೇಡಿಕೆಗೆ ಹೈಕಮಾಂಡ್ ಸ್ಪಂಧಿಸದ ನಡೆಯಿಂದ ಪಕ್ಷೇತರರಾಗಿ ಸ್ಪರ್ಧಿಸಲು ನಂದಕುಮಾರ್ ಅಭಿಮಾನಿ ಬಳಗದ ಕಾರ್ಯಕರ್ತರು ನಿರ್ಧರಿಸಿದ್ದು ಇನ್ನೆರಡು ದಿನಗಳಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಮೂರು ಸಾವಿರಕ್ಕೂ ಅಧಿಕ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಸುಳ್ಯದಲ್ಲಿ ರೋಡ್ ಶೋ ನಡೆಸಿ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲು ನಿರ್ಧರಿಸಲಾಗಿದ್ದು ನಂದಕುಮಾರ್ ರವರನ್ನು ಪಕ್ಷೇತರವಾಗಿ ನಿಲ್ಲಿಸಿ ಗೆಲ್ಲಿಸಲು ಅಭಿಮಾನಿ ಬಳಗದ ಕಾರ್ಯಕರ್ತರು ಪ್ರಯತ್ನಿಸಲಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ.