ಕೆಪಿಸಿಸಿ ಕಾನೂನು ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪೇರಡ್ಕದ ವಹಿದಾ ಆರಿಸ್ ನೇಮಕ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಪೇರಡ್ಕ ನಿವಾಸಿ ಅಡ್ವಕೇಟ್ ವಹಿದಾ ಆರಿಸ್ ರವರನ್ನು ನೇಮಿಸಿ ಆದೇಶಿಸಲಾಗಿದೆ.
ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ರವರ ಅನುಮೋದನೆಯ ಮೇರೆಗೆ ಈ ಆದೇಶ ಮಾಡಲಾಗಿದೆ.

ವಹಿದಾ ಆರಿಸ್ ರವರು ಪೇರಡ್ಕ ನಿವಾಸಿ ಹಾಜಿ ಟಿ ಎಂ ಮೂಸಾರವರ ಪುತ್ರ ಪಿಎಂ ಆರಿಸ್ ರವರ ಪತ್ನಿಯಾಗಿದ್ದು ಪ್ರಸ್ತುತ ಅವರು ಬೆಂಗಳೂರು ನ್ಯಾಯಾಲಯದಲ್ಲಿ ವಕೀಲೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.