ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಎಂ.ಪಿ.ಕುಮಾರಸ್ವಾಮಿ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದ್ದಕ್ಕೆ ಈಗಾಗಲೇ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಎಂ.ಪಿ.ಕುಮಾರಸ್ವಾಮಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.
ಎಂ.ಪಿ.ಕುಮಾರಸ್ವಾಮಿ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ.