ಪುತ್ತೂರು ಕಾಂಗ್ರೆಸ್ ನಲ್ಲಿ ಕ್ಷಿಪ್ರ ಬೆಳವಣಿಗೆ: ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಅಧಿಕೃತವಾಗಿ ಸೇರ್ಪಡೆಯಾದ ದಿವ್ಯಪ್ರಭಾ ಗೌಡ
ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ದಿವ್ಯ ಪ್ರಭಾ ಗೌಡ ಚಿಲ್ತಡ್ಕರವರು ಕಾಂಗ್ರೆಸ್ಸಿನಲ್ಲಿ ಅವಕಾಶ ಸಿಗದ ಕಾರಣಕ್ಕೆ ಕಾಂಗ್ರೆಸ್ ತೊರೆದು ಇಂದು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರು ಜೆಪಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

ದಿವ್ಯ ಪ್ರಭಾ ಅವರು ಜೆಡಿಎಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.
