ಸುಳ್ಯ: ರಾಜಕೀಯ ನಿವೃತ್ತಿ ವಿಚಾರ ‘ಯೂ ಟರ್ನ್’ ಹೊಡೆದ ಅಂಗಾರ
ಸುಳ್ಯ: ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಎಸ್ ಅಂಗಾರ ಯು ಟರ್ನ್ ಹೊಡೆದಿದ್ದಾರೆ. ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುತ್ತೇನೆ ಮತ್ತೆ ರಾಜಕೀಯದಲ್ಲಿ ಸಕ್ರೀಯವಾಗುತ್ತೇನೆ. ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ.
ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜಕೀಯ ನಿವೃತ್ತಿ ಘೋಷಣೆಯನ್ನು ಹಿಂಪಡೆದರು. ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಅಭ್ಯರ್ಥಿ ಸ್ಥಾನ ಸಿಗದ ನೋವಿನಿಂದ ಅಂದಿನ ದಿನದ ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೇನೆ. ಆದರೆ ಬಳಿಕದಲ್ಲಿ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಮುಂದೆಯೂ ಬಿಜೆಪಿ ಪಕ್ಷದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಎಸ್.ಅಂಗಾರ ತಿಳಿಸಿದರು.