ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಗೋರಿಗುಡ್ಡೆಯ ಪ್ರಜ್ವಲ್ ಫಿನ್ಹಾನ್, ಸಕಲೇಶಪುರದ ಧ್ರುವ ಶೆಟ್ಟಿಮತ್ತು ಕುಳಾಯಿಯ ಶಿವಾನಿ (22) ಎಂದು ಗುರುತಿಸಲಾಗಿದೆ. ಬಂಧಿತರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.