ಪುತ್ತೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದೇ ಇರುವುದರಿಂದ ಸ್ವಾಭಿಮಾನಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಘೋಷಿಸಿದ್ದಾರೆ.
ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎ.17ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.