ನನಗೆ ಕ್ಷೇತ್ರ ಇಲ್ಲ ಎನ್ನುತ್ತಿದ್ದ ಈಶ್ವರಪ್ಪಗೆ ಟಿಕೆಟ್ ಕೂಡಾ ಇಲ್ಲ-ಸಿದ್ದರಾಮಯ್ಯ ವ್ಯಂಗ್ಯ
ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಲು ನನಗೆ ಕ್ಷೇತ್ರ ಸಿಗುವುದಿಲ್ಲ ಎಂದು ಟೀಕಿಸುತ್ತಿದ್ದ ಕೆ.ಎಸ್.ಈಶ್ವರಪ್ಪಗೆ ಬಿಜೆಪಿಯವರು ಟಿಕೆಟ್ ಅನ್ನೇ ಕೊಡಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಈಶ್ವರಪ್ಪ, ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ್ ಸೇರಿ ಹಲವು ಹಿರಿಯ ನಾಯಕರನ್ನು ಬಿಜೆಪಿಯವರು ನಡೆಸಿಕೊಂಡ ರೀತಿ ಸರಿಯಾಗಿಲ್ಲ ಪಕ್ಷ ಕಟ್ಟಿ ಸಂಘಟಿಸಿದ ನಾಯಕರನ್ನು ಬಳಿಸಿಕೊಂಡು ಅವರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.