ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ
ಈ ಬಾರಿ ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಟಿಕೆಟ್ ಕೈತಪ್ಪುವ ಭೀತಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಜಗದೀಶ್ ಶೆಟ್ಟರ್ ಮನವೊಲಿಸುವ ಪ್ರಯತ್ನ ನಡೆಸಿದರೂ ಸಂಧಾನ ವಿಫಲವಾಗಿದ್ದು ಅಂತಿಮವಾಗಿ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ಘೋಷಣೆ ಮಾಡಿದರು.