ಸುಳ್ಯ: ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ
ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಮೆರವಣಿಗೆಯಲ್ಲಿ ಸಾಗಿ ಇಂದು ನಾಮ ಪತ್ರ ಸಲ್ಲಿಸಿದರು.
ಬಸ್ ನಿಲ್ದಾಣದಿಂದ ಹೊರಟ ಬೃಹತ್ ಮೆರವಣಿಗೆಯಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.

ಜಿ.ಕೃಷ್ಣಪ್ಪರವರು ಎರಡು ನಾಮಪತ್ರ ಸಲ್ಲಿಸಿದ್ದಾರೆ.
ಚುನಾವಣಾಧಿಕಾರಿ ಅರುಣಕುಮಾರ ಸಂಗಾವಿ ನಾಮಪತ್ರ ಸ್ವೀಕರಿಸಿದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆ.ಪಿ.ಸಿ.ಸಿ. ವಕ್ತಾರ ಟಿ.ಎಂ. ಶಹೀದ್ ರೊಂದಿಗೆ ತೆರಳಿ ಮೊದಲು ನಾಮಪತ್ರ ಸಲ್ಲಿಸಿದರು.
ನಂತರ ಕಡಬ ಬ್ಲಾಕ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಕೆ.ಪಿ.ಸಿ.ಸಿ. ಮಾಜಿ ಸದಸ್ಯ ಡಾ.ರಘು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ ರೊಂದಿಗೆ ಎರಡನೇ ನಾಮಪತ್ರ ಸಲ್ಲಿಸಿದರು.