ಸುಳ್ಯ: ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಭಾಗೀರಥಿ ನಾಮಪತ್ರ ಸಲ್ಲಿಕೆ
ಸುಳ್ಯದಲ್ಲಿ ಬಿಜೆಪಿ ಪಕ್ಷದಿಂದ ಭರ್ಜರಿಗೆ ರೋಡ್ ಶೋ ನಡೆಯಿತು. ರೋಡ್ ಶೋ ಮೂಲಕ ತೆರಳಿದ ವಿಧಾನಸಭಾ ಚುನಾವಣೆಗೆ ಸುಳ್ಯ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಸಿದರು.

ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತೆಂಗಿನ ಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು.
ಸಚಿವ ಎಸ್. ಅಂಗಾರ ವಿಧಾನ ಪರಿಷತ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಸಹಿತ ನಾಯಕರು, ಕಾರ್ಯಕರ್ತರೊಂದಿಗೆ ಮೆರವಣಿಗೆ ನಗರದಲ್ಲಿ ನಡೆಯಿತು.