ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್’ನಿಂದ ಸಿಗದ ಟಿಕೆಟ್: ನಿರ್ಧಾರ ಪ್ರಕಟಿಸಿದ ನಂದಕುಮಾರ್ ಅಭಿಮಾನಿ ಬಳಗ

ಸುಳ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರಿಗೆ ಟಿಕೆಟ್ ಸಿಗದೇ ಇರುವುದರಿಂದ ಅಸಮಾಧಾನಗೊಂಡಿರುವ ಅಭಿಮಾನಿ ಬಳಗದವರು ಕೊನೆಗೂ ತಮ್ಮ ಅಧಿಕೃತ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪಕ್ಷದ ಯಾವುದೇ ಕಾರ್ಯಚಟುವಟಿಕೆಯಲ್ಲಿ ಭಾಗವಹಿಸದೇ ತಟಸ್ಥರಾಗಿರುವುದಾಗಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕಡಬದಲ್ಲಿ ಇಂದು ನಡೆದ ನಂದಕುಮಾರ್ ಅಭಿಮಾನಿಗಳ ಕೋರ್ ಕಮಿಟಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.