ಪುತ್ತೂರು: ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆಗೆ ಜನಸಾಗರ
ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ನಾಮಪತ್ರ ಸಲ್ಲಿಕೆಗೆ ಪುತ್ತೂರು ದರ್ಬೆಯಿಂದ ಸಾವಿರಾರು ಸಂಖ್ಯೆಯಲ್ಲಿ ಅಶೋಕ್ ಕುಮಾರ್ ರೈ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರ ಮೆರವಣಿಗೆ ನಡೆಯಿತು.


ದರ್ಬೆಯಿಂದ ಪುತ್ತೂರು ಮುಖ್ಯ ರಸ್ತೆಯಾಗಿ ಸಾಗಿದ ಮೆರವಣಿಗೆಯಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಾರಾಮ್, ಹೇಮನಾಥ ಶೆಟ್ಟಿ ಕಾವು ಸೇರಿದಂತೆ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ಹೆಜ್ಜೆ ಹಾಕಿದರು.
