ಕರಾವಳಿರಾಜಕೀಯ

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಇಂದು ನಾಮಪತ್ರ ಸಲ್ಲಿಕೆ: 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ



ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಎಪ್ರಿಲ್ 20ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಚಲನಚಿತ್ರ ನಟಿ ಶೃತಿ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಅವರು ಭಾಗವಹಿಸಲಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಆಶೀರ್ವಾದ ಪಡೆದ ಬಳಿಕ ಪುತ್ತೂರು ಕೇಂದ್ರ ಅಂಚೆ ಕಚೇರಿ ಬಳಿಯಿಂದ ಮೆರವಣಿಗೆ ಪ್ರಾರಂಭಗೊಳ್ಳಲಿದೆ.

ಮೆರವಣಿಗೆಯು ಕೋರ್ಟ್ ರಸ್ತೆ ಮುಖಾಂತರ ಕಿಲ್ಲೆ ಮೈದಾನಕ್ಕೆ ಸಾಗಲಿದ್ದು ಅಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಕಿಲ್ಲೆ ಮೈದಾನದಲ್ಲಿ ಸಭೆ ನಡೆಯಲಿದೆ. 10ರಿಂದ 15 ಸಾವಿರದಷ್ಟು ಜನರು ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!