ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆಗೆ ಮೆರವಣಿಗೆ- ಹರಿದು ಬಂದ ಜನಸಾಗರ
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆಗೆ ಬಿಜೆಪಿ ವತಿಯಿಂದ ಪುತ್ತೂರು ಪೇಟೆಯಲ್ಲಿ ಬೃಹತ್ ಮೆರವಣಿಗೆ ನಡೆಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಮುಖ್ಯರಸ್ತೆಯಾಗಿ ಸಾಗಿದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ಚಲನಚಿತ್ರ ನಟಿ ಶ್ರುತಿ, ಸಂಸದ ತೇಜಸ್ವಿ ಸೂರ್ಯ, ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರು ಆಗಿರುವ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು.

ಮೆರವಣಿಗೆ ವೇಳೆ ಎಲ್ಲೆಲ್ಲೂ ಕೇಸರಿಮಯವಾಗಿತ್ತು. ಕಾರ್ಯಕರ್ತರು ಬಿಜೆಪಿ ಮತ್ತು ಆಶಾ ತಿಮ್ಮಪ್ಪ ಗೌಡರಿಗೆ ಜಯ ಘೋಷಗಳನ್ನು ಹಾಕುತ್ತಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.