ಜೆಡಿಎಸ್’ಗೆ ಸೇರ್ಪಡೆಯಾದ ಮೊಯ್ದೀನ್ ಭಾವಾ: ಮಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕೆ
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದೇ ಇರುವುದಕ್ಕೆ ಅಸಮಾಧಾನಗೊಂಡಿರುವ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂದಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿರುವ ಬಾವಾ ಅವರು ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ. ನಾನು ನಂಬಿದ ಕಾಂಗ್ರೆಸ್ ನನಗೆ ಅನ್ಯಾಯ ಮಾಡಿದ ಕಾರಣ ಜೆಡಿಎಸ್ ಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.