ಪುತ್ತೂರು: ಬೆದ್ರಾಳದಲ್ಲಿ ವಿದ್ಯುತ್ ಕಂಬಕ್ಕೆ ಟಿಪ್ಪರ್ ಡಿಕ್ಕಿ
ಪುತ್ತೂರು: ಪುರುಷರಕಟ್ಟೆ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬೆದ್ರಾಳ ರೈಲ್ವೇ ಸೇತುವೆ ಬಳಿ ಎ.20ರಂದು ನಡೆದಿದೆ.

ಟಿಪ್ಪರ್ ಡಿಕ್ಕಿಯಾದ ವೇಳೆ ವಿದ್ಯುತ್ ಕಂಬ ನೆಲಕ್ಕುರುಳಿದ್ದು ತಂತಿಗಳು ತುಂಡಾಗಿ ಬಿದ್ದಿದೆ. ಚಾಲಕನಿಗೆ ಗಾಯವಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ಅಜಾಗರೂಕತೆಯ ಚಾಲನೆ ಘಟನೆಗೆ ಕಾರಣ ಎನ್ನಲಾಗಿದೆ.