ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡರಿಂದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ
ಪುತ್ತೂರು: ಪುತ್ತೂರು ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ದಿವ್ಯಪ್ರಭಾ ಗೌಡರವರು ಎ.22ರಂದು ಪುತ್ತೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರಕ್ಕೆ ಭೇಟಿ ನೀಡಿ ನಾರಾಯಣಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕೋಶಾಧಿಕಾರಿ ಮಹೇಶ್ಚಂದ್ರ ಸಾಲ್ಯಾನ್ ನಡುಬೈಲ್, ಜತೆ ಕಾರ್ಯದರ್ಶಿ ಚಿದಾನಂದ ಸುವರ್ಣ, ಉಪಾಧ್ಯಕ್ಷೆ ಚಂದ್ರಕಲಾ ಮುಕ್ವೆ, ವೇದನಾಥ ಸುವರ್ಣ, ವಿಜಯ ಕುಮಾರ್ ಸೊರಕೆ, ವಸಂತ್ ಕಲ್ಲರ್ಪೆ, ಜೆಡಿಎಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಪದ್ಮಮಣಿಯನ್, ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಪ್ರಭಾಕರ್ ಸಾಲ್ಯಾನ್, ಗದಾಧರ ಮಲ್ಲಾರ ಮತ್ತಿತರರು ಉಪಸ್ಥಿತರಿದ್ದರು.,





