ನಾಮಪತ್ರ ಹಿಂಪಡೆಯುವುದಿಲ್ಲ; ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರ- ಪಕ್ಷೇತರ ಅಭ್ಯರ್ಥಿ ಅಶ್ರಫ್ ಕಲ್ಲೇಗ ಹೇಳಿಕೆ
ಪುತ್ತೂರು : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಶ್ರಫ್ ಕಲ್ಲೇಗ ಅವರು ನಾಮಪತ್ರ ಹಿಂಪಡೆಯುತ್ತಾರೆ ಎನ್ನುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಇದು ಸತ್ಯಕ್ಕೆ ದೂರವಾದ ವಿಚಾರ ಎಂದು ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ

ನಾನು ನಾಮಪತ್ರ ಹಿಂಪಡೆಯುವ ಬಗ್ಗೆ ಸುದ್ದಿ ಹರಿದಾಡುತ್ತಿದ್ದು ನಾನು ನಾಮಪತ್ರ ಹಿಂಪಡೆಯುವ ಪ್ರಶ್ನೆ ಇಲ್ಲ. ಈಗಾಗಲೇ ಮುಖಂಡರ ಜೊತೆ ಹಾಗೂ ನನ್ನ ಬೆಂಬಲಿಗರ ಜೊತೆ ಸಭೆ ನಡೆಸಿದ್ದು ನನಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಇನ್ನೊಂದು ಸುತ್ತಿನ ದೊಡ್ಡ ಮಟ್ಟದ ಸಭೆ ನಡೆಸುತ್ತೇನೆ. ನಾಮಪತ್ರ ಹಿಂಪಡೆಯುವುದಿಲ್ಲ. ನನ್ನ ಶಕ್ತಿ ಏನೆಂಬುದನ್ನು ತೋರಿಸುತ್ತೇನೆ ಎಂದು ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ