ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಗೆ ಕರೆ ಮಾಡಿದ ಯಡಿಯೂರಪ್ಪ
ಪುತ್ತೂರು: ಪುತ್ತೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎ.23ರಂದು ಕರೆ ಮಾಡಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡಿದ್ದರು ಎಂದು ವರದಿಯಾಗಿದೆ.
ಯಡಿಯೂರಪ್ಪ ಕರೆಗೆ ಉತ್ತರಿಸಿರುವ ಪುತ್ತಿಲ ಅವರು, ಕಾರ್ಯಕರ್ತರ ತೀರ್ಮಾನದಂತೆ ನಾನು ಈ ನಿರ್ಧಾರ ತೆಗೆದುಕೊಂಡಿರುವುದರಿಂದ ಇಲ್ಲಿ ನನ್ನ ತೀರ್ಮಾನವೇನೂ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕರ್ನಾಟಕದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೂ ಪುತ್ತಿಲ ಅವರಿಗೆ ಕರೆ ಮಾಡಿರುವುದಾಗಿ ವರದಿಯಾಗಿದೆ.