ಕೆಯ್ಯೂರು ಅಂಗನವಾಡಿ ವಠಾರಕ್ಕೆ ಕರೆದೊಯ್ದು ಅಪ್ರಾಪ್ತೆಯ ಅತ್ಯಾಚಾರ: ಆರೋಪಿ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಪುತ್ತೂರು: ಫೇಸ್ಬುಕ್ನಲ್ಲಿ ಪರಿಚಯವಾದ ಅಪ್ರಾಪ್ತೆಯನ್ನು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿ ಆಕೆಯನ್ನು ಪುಸಲಾಯಿಸಿ ಅಂಗನವಾಡಿ ವರಾಂಡಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಬಗ್ಗೆ ಅಪ್ರಾಪ್ತೆಯೋರ್ವಳು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ನವೀನ್ ಆರೋಪಿ ಎನ್ನಲಾಗಿದೆ. ನವೀನ್ ಫೇಸ್ಬುಕ್ನಲ್ಲಿ ಪರಿಚಯವಾದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಎ.16ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿದ್ದ. ಬಳಿಕ ಆಕೆಯನ್ನು ಪುಸಲಾಯಿಸಿ ರಾತ್ರಿ ಸ್ಕೂಟರ್ನಲ್ಲಿ ಕೆಯ್ಯೂರಿನ ಮಾಡಾವು ಅಂಗನವಾಡಿ ಬಳಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ.
ಆರೋಪಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.