ಕಾಂಗ್ರೆಸ್ 5ನೇ ಗ್ಯಾರಂಟಿ ಘೋಷಿಸಿದ ರಾಹುಲ್ ಗಾಂಧಿ
ಮಂಗಳೂರು: ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಮುಂದುವರಿದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ನ ಐದನೇ ಗ್ಯಾರಂಟಿಯನ್ನು ಎ.27ರಂದು ಘೋಷಣೆ ಮಾಡಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೊದಲ ದಿನದಿಂದಲೇ ಮಹಿಳೆಯರಿಗೆ ಸರಕಾರಿ ಬಸ್ಸಲ್ಲಿ ಉಚಿತ ಪ್ರಯಾಣದ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.
ಮಂಗಳೂರು ನಗರದ ಹೊರವಲಯದ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಚುನಾವಣ ಪ್ರಚಾರದ ಬಹಿರಂಗ ಸಭೆಯಲ್ಲಿ ಈ ಘೋಷಣೆ ಮಾಡಿದ್ದಾರೆ.