ಉಪ್ಪಿನಂಗಡಿ: ಓವರ್ ಟೇಕ್ ಮಾಡುವ ವಿಚಾರದಲ್ಲಿ ಆಟೋ ಚಾಲಕನಿಗೆ ಹಲ್ಲೆ ನಡೆಸಿ ಪರಾರಿ
ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಅಡ್ಡಹೊಳೆಯ ಪೆಟ್ರೋಲ್ ಪಂಪ್ ಬಳಿ ರಸ್ತೆಯಲ್ಲಿ ಹೋಗುತ್ತಿದ್ದ ಆಟೋ ರಿಕ್ಷಾ ಚಾಲಕ ಹಾಗೂ ಕೇರಳ ನೋಂದಣಿಯ ಕಾರಿನಲ್ಲಿ ಬಂದ ವ್ಯಕ್ತಿಗಳ ನಡುವೆ ವಾಹನ ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ ನಡೆದು ಕಾರಿನಲ್ಲಿ ಬಂದಿದ್ದ ವ್ಯಕ್ತಿಗಳು ಆಟೋ ಚಾಲಕನಿಗೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಎ.27ರಂದು ನಡೆದಿದೆ.
ಹಲ್ಲೆಯಿಂದ ಆಟೋ ಚಾಲಕನಿಗೆ ಸಣ್ಣ ಪುಟ್ಟ ಗಾಯ ಗಳಾಗಿದೆ. ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.