ಬೆಂಗಳೂರು: ಕಾಲೇಜು ಆವರಣದಲ್ಲೇ ವಿದ್ಯಾರ್ಥಿಯ ಹತ್ಯೆ
ಕಾಲೇಜು ಫೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕಾಲೇಜು ಆವರಣದಲ್ಲೇ ಚಾಕುವಿನಿಂದ ಇರಿದು ಗುಜರಾತ್ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ.
ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22.ವ) ಮೃತ ವಿದ್ಯಾರ್ಥಿ.
ಮೃತ ಭಾಸ್ಕರ್ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ನಿನ್ನೆ ರಾತ್ರಿ ನಡೆದ ಕಾಲೇಜ್ ಫೆಸ್ಟ್ ಕಾರ್ಯಕ್ರಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಭಾಸ್ಕರ್ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಪೊಲೀಸರು ಕಾಲೇಜಿನ ಸಿಸಿ ಟಿವಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.