ಕರಾವಳಿರಾಜಕೀಯ

ನಾಳೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮಂಗಳೂರಿಗೆ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ 1ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ‌ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು
ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್‌ ಗೆ ಅಗಮಿಸಲಿರುವ ಅವರು ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ‌ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!