ಈ ಬಾರಿ ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಿಸಲಿದೆ: ದಿವ್ಯ ಪ್ರಭಾ ಗೌಡ
ಪುತ್ತೂರು ವಿಧಾನಸಭಾ ಕ್ಷೇತ್ರದ ನಿಷ್ಠಾವಂತ ಕಾರ್ಯಕರ್ತರ, ಮತದಾರರ ಧ್ವನಿಯಾಗಿ ಕೆಲಸ ಮಾಡುವ ಪ್ರತಿಜ್ಞೆಯೊಂದಿಗೆ ನಾನು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುತ್ತಿದ್ದೇನೆ ಎಂದು ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ತಿಳಿಸಿದ್ದಾರೆ.

ಈ ಕ್ಷೇತ್ರದಲ್ಲಿ ಜಾತ್ಯಾತೀತವಾಗಿ ಅನೇಕ ವರ್ಷಗಳಿಂದ ಜನಸೇವೆಯಲ್ಲಿ ತೊಡಗಿಕೊಂಡಿರುವ ನನ್ನೊಂದಿಗೆ ಅನೇಕ ಕಾರ್ಯಕರ್ತರು, ಅಭಿಮಾನಿಗಳು ಹಿತೈಷಿಗಳು ಬೆನ್ನೆಲುಬಾಗಿ ನಿಂತಿದ್ದಾರೆ. ಅಧಿಕಾರ, ಉನ್ನತ ಹುದ್ದೆಗಳಿಗಿಂತಲೂ ಜನರ ಅಭಿಮಾನ ನಂಬಿಕೆಯೇ ಮೇಲು ಎಂದು ನಂಬಿಕೊಂಡಿರುವವಳು ನಾನು ಎಂದು ಅವರು ತಿಳಿಸಿದ್ದಾರೆ.
ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಸೌಹಾರ್ದತಯುತ ಸಮಾಜದ ನಿರ್ಮಾಣಕ್ಕಾಗಿ ನನ್ನೊಂದಿಗೆ ಕೈಜೋಡಿಸಿ ಮುನ್ನಡೆಯುತ್ತಿರುವ ಯುವ ಸಮೂಹವೇ ನನ್ನ ಶಕ್ತಿ. ಈ ಬಾರಿ ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಿಸಲಿದೆ. ಎಂದು ದಿವ್ಯ ಪ್ರಭಾ ಗೌಡ ತಿಳಿಸಿದ್ದಾರೆ.