ಪುತ್ತೂರಿನಲ್ಲಿ ಅನೈತಿಕ ಗೂಂಡಾಗಿರಿ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಪುತ್ತೂರು: ಪುತ್ತೂರಿನಲ್ಲಿ ಮುಸ್ಲಿಮ್ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಹಲ್ಲೆಗೊಳಗಾದ ಯುವಕ ಯುವಕ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪರ್ಲಡ್ಕ ಗೋಳಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20. ವ) ಗಂಭೀರ ಗಾಯಗೊಂಡ ಯುವಕ.
ಸಂಘಪರಿವಾರದ ಕಾರ್ಯಕರ್ತರು ಯುವಕನನ್ನು ರೂಂ ಒಂದರಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆ ನಡೆಸಿದ ನಂತರ ಯುವಕನನ್ನು ಪುತ್ತೂರು ಪೊಲೀಸರಿಗೆ ಒಪ್ಪಿಸಿ ಯುವಕನು ತನ್ನ ಸಹಪಾಠಿ ಗೆಳತಿಯಾದ ಹಿಂದೂ ಯುವತಿಯೊಂದಿಗೆ ಮಾತನಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಘಟನೆಯನ್ನು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ಕಲ್ಲೇಗ ಖಂಡಿಸಿದ್ದು ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.