ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡರಿಂದ ಭರ್ಜರಿ ಪ್ರಚಾರ
ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಅವರು ಬಡಗನ್ನೂರು , ಪಡುಮಲೆಯಲ್ಲಿ ಭರ್ಜರಿ ಮತ ಪ್ರಚಾರ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದರು.

ಚುನಾವಣಾ ದಿನಾಂಕ ಹತ್ತಿರ ಬರುತ್ತಿದ್ದಂತೆ ಅಭ್ಯರ್ಥಿಗಳ ಪ್ರಚಾರದ ವೇಗ ಮತ್ತಷ್ಟು ಹೆಚ್ಚುತ್ತಿದ್ದು ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ರವರು ಕಾರ್ಯಕರ್ತರೊಂದಿಗೆ ಫೀಲ್ಡ್ ಗೆ ಇಳಿದು ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ.

ಬಡಗನ್ನೂರು, ಪಡುಮಲೆಯಲ್ಲಿ ಮನೆ ಮನೆ ಭೇಟಿ ನೀಡಿ ಮತ ಯಾಚನೆ ನಡೆಸಿದರು ಹಾಗೂ ಪಡುಮಲೆ ಕಿನ್ನಿಮಣಿ ಪೂಮಣಿ ದೈವಸ್ಥಾನ ಹಾಗೂ ಪಡುಮಲೆ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಕ್ಷೇತ್ರದಾದ್ಯಂತ ಪ್ರಚಾರದಲ್ಲಿ ತೊಡಗಿರುವ ದಿವ್ಯ ಪ್ರಭಾ ಗೌಡ ಅವರು ತಮಗೆ ಮತ ನೀಡುವಂತೆ ವಿನಂತಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಹಲವರು ದಿವ್ಯ ಪ್ರಭಾ ಗೌಡ ಅವರ ಜೊತೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.