ಹಿಂಸಾಚಾರಕ್ಕೆ ತಿರುಗಿದ ಜಮೀನು ವಿವಾದ ಗಲಾಟೆ; ಒಂದೇ ಕುಟುಂಬದ ಆರು ಮಂದಿಯ ಹತ್ಯೆ
ಜಮೀನು ವಿವಾದ ಹಿಂಸಾಚಾರಕ್ಕೆ ತಿರುಗಿದ್ದು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ವರದಿಯಾಗಿದೆ.

ಇಬ್ಬರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಕೇಂದ್ರದಿಂದ 50 ರಿಂದ 60 ಕಿಮೀ ದೂರದಲ್ಲಿರುವ ಲೇಪಾ ಗ್ರಾಮದಲ್ಲಿ ಧೀರ್ ಸಿಂಗ್ ತೋಮರ್ ಮತ್ತು ಗಜೇಂದ್ರ ಸಿಂಗ್ ತೋಮರ್ ಕುಟುಂಬಗಳ ನಡುವೆ ಜಗಳ ನಡೆದಿದೆ.
2013ರಲ್ಲಿ ತ್ಯಾಜ್ಯ ಸುರಿಯುವ ವಿಚಾರದಲ್ಲಿ ಎರಡು ಕುಟುಂಬಗಳು ಜಗಳವಾಡಿದ್ದವು. ಆಗ ಧೀರ್ ಸಿಂಗ್ ತೋಮರ್ ಕುಟುಂಬದ ಇಬ್ಬರು ಸಾವನ್ನಪ್ಪಿದ್ದರು. ಆನಂತರ ಗಜೇಂದ್ರ ಸಿಂಗ್ ತೋಮರ್ ಕುಟುಂಬವು ಗ್ರಾಮದಿಂದ ಪಲಾಯನ ಮಾಡಿತ್ತು.
ಎರಡು ಕುಟುಂಬಗಳು ನ್ಯಾಯಾಲಯದ ಹೊರಗೆ ರಾಜಿ ಮಾಡಿಕೊಂಡಿದ್ದು, ನಂತರದ ಕುಟುಂಬ ಇಂದು ಗ್ರಾಮಕ್ಕೆ ಮರಳಿದೆ. ಧೀರ್ ಸಿಂಗ್ ತೋಮರ್ ಅವರ ಕುಟುಂಬವು ಪೂರ್ವಯೋಜಿತ ದಾಳಿ ನಡೆಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ.