ಕರಾವಳಿ

ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭ ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ-ಡಿಸಿ ರವಿಕುಮಾರ್



ಮೇ.13ರಂದು ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬೀಳಲಿದ್ದು ದ.ಕ ಜಿಲ್ಲಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯ ಸಿದ್ಧತೆ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ 1860 ಮತಗಟ್ಟೆಗಳಿದ್ದು, ಗರಿಷ್ಟ 18 ಸುತ್ತುಗಳು ಮತ ಎಣಿಕೆ ನಡೆಯಲಿದೆ.

ಜಿಲ್ಲಾಧಿಕಾರಿ ರವಿಕುಮಾರ್

ಸುರತ್ಕಲ್ ಎನ್ಐಟಿಕೆಯಲ್ಲಿ ಮತ ಎಣಿಕೆಯ ಸಿದ್ಧತೆ ಪೂರ್ಣಗೊಂಡಿದೆ. ಎಣಿಕೆಯ ಕೊಠಡಿಗಳಲ್ಲಿ ವೆಬ್‌ ಕಾಸ್ಟಿ ವ್ಯವಸ್ಥೆ ಮತ್ತು ಸಿಸಿಟಿವಿಗಳನ್ನು ಆಳವಡಿಸಲಾಗಿದೆ.

ಬೆಳಗ್ಗೆ 8ರಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು ಅಪರಾಹ್ನ 2 ಗಂಟೆಯ ಒಳಗಡೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಜಿಲ್ಲೆಯಲ್ಲಿ ನಾಳೆ (ಮೇ 13) ಬೆಳಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ಘಂಟೆವರೆಗೆ ವಿಜಯೋತ್ಸವ ಮಾಡುವುದು, ಮೆರವಣಿಗೆ ನಡೆಸುವುದನ್ನು ನಿಷೇಧಿಸುವ ಸಲುವಾಗಿ ಕಂ 144ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!